ಕೊಪ್ಪಳ : ರಾಜ್ಯದಲ್ಲಿ ಬಿಜೆಪಿಯನ್ನು ಹೈಕಮಾಂಡ್ ಬಿ.ಎಸ್.ಯಡಿಯೂರಪ್ಪ ಕುಟುಂಬಕ್ಕೆ ಲೀಸ್ ಗೆ ನೀಡಿದ್ಯಾ? ಎಂದು ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಯತ್ನಾಳ್, ಭ್ರಷ್ಟಾಚಾರ ಮಾಡಿ ಬಿಎಸ್ ವೈ ಜೈಲಿಗೆ ಹೋಗಿದ್ದರು.ಅಪ್ಪನ ಸಹಿಯನ್ನೇ ವಿಜಯೇಂದ್ರ ನಕಲು ಮಾಡಿದ್ದಾರೆ. ಆದಾಗ್ಯೂ ರಾಜ್ಯಾಧ್ಯಕ್ಷ ಪಟ್ಟ ಕಟ್ಟಲಾಗಿದೆ. ಅಪ್ಪ-ಮಕ್ಕಳ ವಿರುದ್ಧ ಭ್ರಷ್ಟಾಚಾರ ಆರೋಪಗಳಿವೆ. ಈಗ ನನ್ನನ್ನು ಉಚ್ಚಾಟನೆ ಮಾಡಿ ಭ್ರಷ್ಟರಿಗೆ ಹಸಿರು ನಿಶಾನೆ ತೋರಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ಈಗ ಹಿಂದೂಗಳ ಪರ ಇಲ್ಲ. ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ಇದೆ. ರಾಜ್ಯ ಸರ್ಕಾರ ಸರಿಯಾಗಿ ವಾದ ಮಂಡಿಸಿದ್ದರೆ ಯಡಿಯೂರಪ್ಪ ಇಂದೇ ಜೈಲಿಗೆ ಹೋಗುತ್ತಾರೆ ಎಂದು ಕಿಡಿಕಾರಿದರು.