ವಿಜಯಪುರ: ಉತ್ತರ ಕರ್ನಾಟಕದಾದ್ಯಂತ ಭೀಕರ ಪ್ರವಾಹದಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಭೀಮಾ ನದಿ ಉಕ್ಕಿ ಹರಿದು ತೀರ ಪ್ರದೇಶಗಳು ತತ್ತರಿಸಿ ಹೋಗಿದ್ದು, 10 ಸಾವಿರಕ್ಕೂ ಹೆಚ್ಚು ಮಂದಿ ಸಂಕಷ್ಟಕ್ಕೀಡಾಗಿದ್ದಾರೆ.
ಇದೀಗ ತಕ್ಷಣವೇ ಕೇಂದ್ರ ಸರ್ಕಾರ ಪ್ರವಾಹ ಪೀಡಿತರಿಗೆ ನೆರವಾಗಬೇಕೆಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮನವಿ ಮಾಡಿದ್ದಾರೆ.




