Join The Telegram | Join The WhatsApp |
ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪಿಂಪ್ ಅಂತ ಭಾಷೆ ಪ್ರಯೋಗಿಸಿದ್ದಾರೆ. ಆ ಸಂಸ್ಕೃತಿಯಲ್ಲಿ ಇದ್ದವರೇ ಆ ರೀತಿ ಮಾತಾಡಿದ್ದಾರೆ.
ಅಪ್ಪನಿಗೆ ಹುಟ್ಟಿದವರು ಈ ರೀತಿ ಮಾತನಾಡಲ್ಲ.
ನಾಲಿಗೆ ಹರಿ ಬಿಟ್ಟು ಮಾತನಾಡಿದರೆ ನಾಲಿಗೆ ಕತ್ತರಿಸುವ ಕೆಲಸವಾಗುತ್ತದೆ. ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
ಪಕ್ಷದಲ್ಲಿ ಇರೋಕೆ ಆಗಲ್ಲ ಅಂದರೆ ರಾಜೀನಾಮೆ ಕೊಟ್ಟು ಹೋಗಲಿ. ರಾಜೀನಾಮೆ ಕೊಟ್ಟು ಹೋಗಿ , ಪ್ರತಿಭಟನೆ ಮಾಡಲಿ ಎಂದು ಸಚಿವ ಮುರಗೇಶ ನಿರಾಣಿ ಕಿಡಿಕಾರಿದ್ದಾರೆ.
ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಶಾಸಕ ಯತ್ನಾಳ್ ಆಟಕ್ಕೆ ವಿಜಯಪುರದ ಜನರು ಉತ್ತರ ಕೊಡುತ್ತಾರೆ. 2ಎ ಮೀಸಲಾತಿ ಬೇಡಿಕೆ ಇಂದು, ನಿನ್ನೆಯದಲ್ಲ. ಪಂಚಮಸಾಲಿಗೆ 2ಎ ಮೀಸಲಾತಿ ನೀಡಲು ಸಿಎಂಗೆ ಬದ್ಧತೆ ಇದೆ.
2C, 2D ಸ್ಥಾಪನೆ ಮಾಡಿ ಮೀಸಲಾತಿಗೆ ಸರ್ಕಾರ ಮುಂದಾಗಿತ್ತು. ಇಷ್ಟೆಲ್ಲಾ ಮಾಡಿದರೂ ನಮ್ಮ ಮೇಲೆ ಗೂಬೆ ಕೂರಿಸಲು ಪ್ರಯತ್ನ ಮಾಡುತ್ತಿದ್ದಾರೆ. SC, ST, ಒಕ್ಕಲಿಗ ಸಮುದಾಯ ಶಾಂತಿಯುತವಾಗಿ ಮನವಿ ಮಾಡಿದೆ ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಂಚಮಸಾಲಿಗೆ ಮೀಸಲಾತಿ ಕಲ್ಪಿಸುವ ವಿಶ್ವಾಸ ಇದೆ. ನಿನ್ನೆ (ಜ.13) ಶಿಗ್ಗಾಂವಿಯಲ್ಲಿ ಕೂಡಲಸಂಗಮದ ಪಂಚಮಸಾಲಿ ಗುರುಪೀಠಾಧ್ಯಕ್ಷ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಭಟನೆ ನಡೆಸಿದ್ದಾರೆ.
ಶ್ರೀಗಳ ಪ್ರತಿಭಟನೆಯನ್ನು ನಾವು ಖಂಡಿಸುತ್ತೇವೆ ಎಂದು ಬೆಂಗಳೂರಿನಲ್ಲಿ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಇದು ರಾಜಕೀಯ ಪ್ರೇರಿತ ಪ್ರತಿಭಟನೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸರ್ಕಾರಕ್ಕೆ ಮುಜುಗರ ತರುವ ಹೇಳಿಕೆ ನೀಡುತ್ತಿದ್ದಾರೆ. ಮೀಸಲಾತಿ ವಿಚಾರದಲ್ಲಿ ಯತ್ನಾಳ್ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು
Join The Telegram | Join The WhatsApp |