Ad imageAd image

ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ : ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ 

Bharath Vaibhav
ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ : ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ 
bsy
WhatsApp Group Join Now
Telegram Group Join Now

ಬೆಂಗಳೂರು : ಬಿ.ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

ಬೆಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ಪೊಲೀಸರು ಬಿ.ಎಸ್ ಯಡಿಯೂರಪ್ಪ ವಿರುದ್ಧದ ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ನನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು.

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಕಳೆದ ಫೆಬ್ರವರಿಯಲ್ಲಿ ತನ್ನ 17 ವರ್ಷದ ಪುತ್ರಿ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಮಹಿಳೆಯೊಬ್ಬರು ಯಡಿಯೂರಪ್ಪ ವಿರುದ್ಧ ದೂರು ನೀಡಿದ್ದರು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!