ಬೆಂಗಳೂರು: ಜೂನ್.17ರಂದು ಪೋಕ್ಸೋ ಪ್ರಕರಣ ಸಂಬಂಧ ಸಿಐಡಿ ನೀಡಿರುವ ನೋಟಿಸ್ ಹಿನ್ನಲೆಯಲ್ಲಿ ವಿಚಾರಣೆಗೆ ಪೊಲೀಸರ ಮುಂದೆ ಹಾಜರಾಗುವುದಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಪೋಕ್ಸೋ ಕೇಸ್ ಸಂಬಂಧ ಸೋಮವಾರ ವಿಚಾರಣೆ ಹೋಗುತ್ತೇನೆ.ನಿಗದಿತ ಕಾರ್ಯಕ್ರಮದ ನಿಮಿತ್ತ ದೆಹಲಿಗೆ ಹೋಗಿದ್ದೆ. ಹೀಗಾಗಿ ಈ ಹಿಂದೆ ವಿಚಾರಣೆಗೆ ಹಾಜರಾಗಿರಲಿಲ್ಲ ಎಂದರು.
ಜೂನ್.17ರ ಸೋಮವಾರದಂದು ವಿಚಾರಣೆಗೆ ಬರುವುದಾಗಿ ನಾನು ಮೊದಲೇ ತಿಳಿಸಿದ್ದೆ. ಹೈಕೋರ್ಟ್ ಸಹ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಅಲ್ಲದೇ ಬಂಧಿಸದಂತೆ ತಡೆಯಾಜ್ಞೆ ನೀಡಿದೆ. ಈ ಹಿನ್ನಲೆಯಲ್ಲಿ ನಾನು ಜೂನ್.17ರ ಸೋಮವಾರದಂದು ಸೋಮವಾರ ನಾನು ವಿಚಾರಣೆಗೆ ಹೋಗುತ್ತಿದ್ದೇನೆ ಎಂದರು.
ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದಂತ ಅವರು, ಅನಾವಶ್ಯಕವಾಗಿ ಗೊಂದಲ ಉಂಟು ಮಾಡುವ ಕೆಲಸ ಮಾಡಿದ್ರು. ನಾನು ಯಾರ ಮೇಲೆ ದೂರುವುದಿಲ್ಲ. ಕಾಲವೇ ಎಲ್ಲ ತೀರ್ಮಾನ ಮಾಡಲಿದೆ, ವಾಸ್ತವ ಏನು ಅಂತ ಜನರಿಗೆ ಗೊತ್ತಿದೆ. ಯಾರು ಕುತಂತ್ರ ಮಾಡ್ತಿದ್ದಾರೋ ಜನ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂಬುದಾಗಿ ಕಿಡಿಕಾರಿದರು.