ದಾವಣಗೆರೆ : ದೇಶದ ಹಿರಿಯ ರಾಜಕಾರಣಿ, ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ (95) ಭಾನುವಾರ ಸಂಜೆ ನಿಧನರಾಗಿದ್ದು, ದಾವಣಗೆರೆಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಅಂತಿಮ ದರ್ಶನ ಪಡೆದಿದ್ದಾರೆ.
ಶಾಸಕರು ಹಾಗೂ ವೀರಶೈವ ಮಹಾಸಭಾ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಸಚಿವ ರೇಣುಕಾಚಾರ್ಯ ಅವರು ಅಂತಿಮ ದರ್ಶನ ಪಡೆದಿದ್ದಾರೆ.
ಇಂದು ಸಂಜೆ ಕಲ್ಲೇಶ್ವರ ಮಿಲ್ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಹಿರಿಯ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ ನಡೆಯಲಿದೆ. ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ.




