ಗೋಕಾಕ : ನಿನ್ನೆ ದಿನಾಂಕ 29 ರಂದು ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅವರು ಸಂಜೆ ಕೂಡಾ ಗೋಕಾಕ ಗೃಹಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಅವರ ಸಮಸ್ಯೆಗಳಿಗೆ ಸ್ಪಂದನೆ ನೀಡಿದರು.

ಜನರೊಂದಿಗೆ ನಿರಂತರ ಸಂಪರ್ಕ ಮತ್ತು ಸಮನ್ವಯ ಸಾಧಿಸುವ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಮುಂದುವರೆಸಲಾದೆ.
ಈ ಸಂದರ್ಭದಲ್ಲಿ ಆಪ್ತ ಸಹಾಯಕರಾದ ಶ್ರೀ ಅರವೀಂದ ಅಣ್ಣಾ ಕಾರ್ಚಿ.ಶ್ರೀ ಮಲಗೌಡ ಅಣ್ಣಾ ಪಾಟೀಲ ಹಾಗೂ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.
ವರದಿ : ರಾಜು ಮುಂಡೆ .




