ವಿಜಯಪುರ: ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿಯೊಬ್ಬಳು ದಾರುಣವಾಗಿ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ನವಭಾಗ್ ರಸ್ತೆಯ ಫಿಶ್ ಟನಲ್ ಎಕ್ಸ್‌ಪೋದಲ್ಲಿ ನಡೆದಿದೆ.
ಮೃತಳನ್ನು ನಿಖಿತಾ ಎಂದು ಗುರುತಿಸಲಾಗಿದೆ. ಸೊಂಟಕ್ಕೆ ಕಟ್ಟಿದ್ದ ಬೆಲ್ಟ್ ಕಟ್ ಆಗಿ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಅ.20ರಂದು ಸಂಜೆ ತನ್ನಿಬ್ಬರು ಗೆಳತಿಯರ ಜೊತೆ ನಿಖಿತಾ, ಫಿಶ್ ಟನಲ್ ಎಕ್ಸ್‌ಪೋದಲ್ಲಿರುವ ರೇಂಜರ್ ಸ್ವಿಂಗ್‌ನಲ್ಲಿ ಕುಳಿತಿದ್ದರು. ಈ ವೇಳೆ ನಿಖಿತಾಳ ಸೊಂಟಕ್ಕೆ ಕಟ್ಟಿದ್ದ ಬೆಲ್ಟ್ ಏಕಾಏಕಿ ಕಟ್ ಆಗಿ ಕೆಳಗೆ ಬಿದ್ದಿದ್ದಾರೆ.
ತಲೆ ಕೆಳಗಾಗಿ ಬಿದ್ದ ರಭಸಕ್ಕೆ ನಿಖಿತಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಆಕೆಯನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಖಿತಾ ಇಹಲೋಕ ತ್ಯಜಿಸಿದ್ದಾರೆ.
ಘಟನೆಯ ಸಂಪೂರ್ಣ ದೃಶ್ಯ ನಿಖತಾ ಪೋಷಕರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಈ ಸಂಬಂಧ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.