ಮದುವೆಯಾಗಲು ಯುವತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಮನನೊಂದು ಪುರೋಹಿತ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಕೋಲದಲ್ಲಿ ನಡೆದಿದೆ.
ಅಂಕೋಲಾ ತಾಲೂಕಿನ ಅಸ್ಲಗದ್ದೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಪವನ್ ಭಟ್ (24) ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪವನ್ ಭಟ್ ವೃತ್ತಿಯಲ್ಲಿ ಪೌರೋಹಿತ್ಯ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಅಲ್ಲದೇ ಊರಿನಲ್ಲಿ ಯುವತಿಯೊಬ್ಬಳನ್ನು ಪವನ್ ಲವ್ ಮಾಡುತ್ತಿದ್ದರು. ಆದರೆ ನಂತರ ಯುವತಿ ಮದುವೆಯಾಗಲು ನಿರಾಕರಿಸಿದ್ದಾಳೆ. ಪವನ್ ಮದುವೆಯಾಗುವಂತೆ ಎಷ್ಟೇ ದುಂಬಾಲು ಬಿದ್ದರೂ ಆಕೆ ನಿರಾಕರಿಸಿದ್ದಾಳೆ.
ಇದರಿಂದ ಮನನೊಂದ ಪವನ್ ಭಟ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ .ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಕೇಸ್ ದಾಖಲಿಸಿಕೊಂಡಿದ್ದಾರೆ.




