Ad imageAd image

 ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಆದ್ಯತೆ ನೀಡಲು ಸಕ್ಕರೆ ಸಚಿವರ ಮನವಿ

Bharath Vaibhav
WhatsApp Group Join Now
Telegram Group Join Now

——————————————————ಸಕ್ಕರೆ ರಫ್ತಿಗೆ ಅನುಮತಿ ನೀಡಲು ಕೇಂದ್ರ ಸರ್ಕಾರಕ್ಕೆ ಆಗ್ರಹ

ಬೆಳಗಾವಿ: ಸಕ್ಕರೆ ರಫ್ತು ಮಾಡಲು ಕಾರ್ಖಾನೆಗಳಿಗೆ ಅನುಮತಿ ನೀಡಬೇಕೆಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ವಾರ್ಷಿಕ ಸರ್ವಸಾಧಾರಣ ಮಹಾ ಸಭೆಯ ನಂತರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರ ಸರ್ಕಾರ ಸಕ್ಕರೆ ರಫ್ತು ಮಾಡಲು ಅನುಮತಿ ನೀಡಿದರೆ ಮಾತ್ರ ಕಬ್ಬು ಬೆಳೆಗಾರರ ಹಿತರಕ್ಷಣೆ ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಕಬ್ಬು ಬೆಳೆಗಾರರಿಗೆ ಬಾಕಿ ಬಿಲ್ ಪಾವತಿ ಮಾಡಲು ಕಾರ್ಖಾನೆಗಳಿಗೆ ಸಕ್ಕರೆ ರಫ್ತಿಗೆ ಅನುಮತಿ ಇದ್ದರೆ ಸಮಸ್ಯೆಯಾಗದು. ರಫ್ತಿಗೆ ಅನುಮತಿ ನೀಡದ ಕಾರಣ ಹಲವು ಕಾರ್ಖಾನೆಗಳು ರೈತರಿಗೆ ಕಬ್ಬಿನ ಬಿಲ್ ಬಾಕಿ ಉಳಿಸಿಕೊಂಡಿವೆ. ಬಿಲ್ ಪಾವತಿ ಮಾಡಲು ಕಾರ್ಖಾನೆಗಳ ಬಳಿ ಪ್ರತ್ಯೇಕ ಬಂಡವಾಳ ಇರುವುದಿಲ್ಲ. ಕೇಂದ್ರ ಸರ್ಕಾರ ಇದನ್ನು ಮನಗಂಡು ರೈತರ ಹಿತರಕ್ಷಣೆಯ ಪೂರಕ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ತೊಗರಿ ನಮ್ಮಲ್ಲೆ ಗಣನೀಯ ಪ್ರಮಾಣದಲ್ಲಿ ಬೆಳೆಯಲಾಗುತ್ತಿದೆ. ಆದರೂ, ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಇದರಿಂದ ತೊಗರಿ ಬೆಲೆ ಕೆ.ಜಿ.ಗೆ ರೂ.90/- ಗೆ ಕುಸಿದಿದೆ. ಹೀಗಾಗಿ, ಯಾವುದನ್ನು ಆಮದು ಮಾಡಿಕೊಳ್ಳಬೇಕು, ಯಾವುದನ್ನು ರಫ್ತು ಮಾಡಲು ಅನುಮತಿ ನೀಡಬೇಕು ಎಂಬ ಬಗ್ಗೆ ಕೇಂದ್ರ ಚಿಂತಿಸಬೇಕು.

ಈರುಳ್ಳಿ ಮತ್ತು ಟೊಮ್ಯಾಟೊ ಬೆಲೆ ಕುಸಿದು ರೈತರು ಅವುಗಳನ್ನು ರಸ್ತೆಗೆ ಸುರಿಯುವ ಪರಿಸ್ಥಿತಿ ಬರಬಾರದು. ಈ ನಿಟ್ಟಿನಲ್ಲಿ ಕೇಂದ್ರ ಚಿಂತನೆ ಮಾಡಬೇಕು ಎಂದು ಹೇಳಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!